ಬೆಂಗಳೂರು : ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.
“ಊರು ಕೊಳ್ಳೆ ಹೋದ ಮೇಲೆ ಡಿಡ್ಡಿ ಬಾಗಿಲು ಹಾಕಿದಂತೆ” ಎಂಬಂತೆ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಮತ್ತಿತರ ಪ್ರಮುಖರು ಭಾಗವಹಿಸಿ ಪಕ್ಷದ ನಿಲುವನ್ನು ಸಮರ್ಥವಾಗಿ ಮಂಡಿಸಿದ್ದಾರೆ ಎಂದು ಅವರು ವಿವರ ನೀಡಿದ್ದಾರೆ.
Facebook
Twitter
LinkedIn
WhatsApp
Telegram
Email
Tumblr