ರಾಜ್ಯದ ಎಲ್ಲಾ ಮಹಿಳೆಯರಿಗೂ ಬಸ್ ಪ್ರಯಾಣ ಉಚಿತ

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಸರ್ಕಾರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿದ್ದು, ಯಾವುದೇ ಷರತ್ತು ವಿಧಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

 

ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ಜನತೆಗೆ ನೀಡಿದ್ದ ೫ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಲಾಗುವುದು ಎಂದರು.

ಸರ್ಕಾರಿ ಬಸ್ಸುಗಳಲ್ಲಿ ಬಿಪಿಎಲ್ ಕಾರ್ಡು ಇದ್ದ ಮಹಿಳೆಯರು ಮಾತ್ರ ಉಚಿತವಾಗಿ ಪ್ರಯಾಣಿಸಬಹುದು ಎಂಬ ಷರತ್ತು ವಿಧಿಸಿಲ್ಲ. ಬಿಪಿಎಲ್-ಎಪಿಎಲ್ ಕಾರ್ಡು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದರು.

ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಎಲ್ಲಾ ಮಹಿಳೆಯರಿಗೆ ಉಚಿತ ಎಂಬುದು ನಮ್ಮ ಪ್ರಣಾಳಿಕೆಯಾಗಿತ್ತು. ನಾಳೆ ಸಚಿವ ಸಂಪು ಟಕ್ಕೆ ಸಾರಿಗೆ ಇಲಾಖೆ ವರದಿ ನೀಡಲಿದೆ. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದರು.

 

ಯೋಜನೆ ಜಾರಿಗೆ ಪ್ರತಿವರ್ಷ ಅಂದಾಜು 3200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ ಎಂದರು.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊ ಳಿಸುವ ಬಗ್ಗೆ ರೂಪುರೇಷೆಗಳ ಕುರಿತು ಚರ್ಚಸಿದರು. ಸಭೆಯಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ವರದಿ ರೂಪದಲ್ಲಿ ಮುಖ್ಯಮಂತ್ರಿಗಳ ಮುಂದೆ ಮಂಡಿಸ ಲಾಗುವುದು. ಅವರು ಈಗಾ ಗಲೇ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ನಿನ್ನೆ ಮಾತನಾಡಿದ್ದಾರೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಿಎಂಗೆ ವರದಿ ಸಲ್ಲಿಸುತ್ತಾರೆ. ಮುಖ್ಯ ಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಜಾರಿಗೆ ನಿರ್ಧಾರ ಮಾಡುತ್ತಾರೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ರಾಜ್ಯದಲ್ಲಿ ಅರ್ಧದಷ್ಟು ಮಹಿಳೆಯರಿ ದ್ದಾರೆ, ಅಂದರೆ 3.5 ಕೋಟಿ. ಅವರೆಲ್ಲರೂ ಬಸ್ ಗಳಲ್ಲಿ ಸಂಚರಿಸುವುದಿಲ್ಲ. ಹೀಗಾಗಿ ನಾವು ಎಲ್ಲರಿಗೂ ಉಚಿತ ಪಾಸ್ ಗಳನ್ನು ನೀಡಲು ಸಾಧ್ಯವಿಲ್ಲ. ಎಷ್ಟು ಹುಡುಗಿಯರು ಶಾಲಾ-ಕಾಲೇಜುಗಳಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ, ಎಷ್ಟು ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಾರೆಂಬುದನ್ನು ಗುರುತಿಸಬೇಕಿದೆ. ಇದೇ ವೇಳೆ ಯೋಜನೆ ಜಾರಿಗೆ ತರಲು ನಮಗೆ ಸರ್ಕಾರ ಎಷ್ಟು ಆರ್ಥಿಕ ನೆರವು ನೀಡುತ್ತದೆ ಎಂಬುದನ್ನೂ ನೋಡಬೇಕಿದೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದ್ದು, ಇದು ಸವಾಲಾಗಿ ಪರಿಣಮಿಸಲಿದೆ. ಆದರೆ, ಅದನ್ನು ನಿಭಾಯಿಸುತ್ತೇವೆ.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಅಥವಾ ಯಾವುದೇ ಆರ್‌ಟಿಸಿ ಸರ್ಕಾರಿ ಸ್ವಾಮ್ಯದ ನಿಗಮವಾಗಿದೆ. ಅದನ್ನು ಲಾಭದಾಯಕ ಉದ್ಯಮವಾಗಿ ನೋಡಲಾಗುವುದಿಲ್ಲ. ಶೇ.೪೦ರಷ್ಟು ಬಸ್ಸು ಗಳನ್ನು ನಷ್ಟದಲ್ಲಿ ಓಡಿಸಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಾವು ಕಾರ್ಯ ನಿರ್ವಹಿಸಬೇಕು. ಹೀಗಾಗಿ ನಾವು ಅದನ್ನು ನಷ್ಟವೆಂದು ನೋಡಲು ಸಾಧ್ಯವಾ ಗುವುದಿಲ್ಲ. ಇನ್ನೂ ಶೇ.೪೦ರಷ್ಟು ಬಸ್‌ಗಳು ಲಾಭವಿಲ್ಲದೆ, ನಷ್ಟವಿಲ್ಲದೇ ಉಳಿದ ಶೇ.೨೦ರಷ್ಟು ಲಾಭದಲ್ಲಿ ಓಡುತ್ತಿವೆ. ನಷ್ಟ ದೂರಾಗಿಸಲು ನಾವು ಸಂಪೂರ್ಣ ಫ್ಲೀಟ್ ನ್ನು ನಿರ್ವಹಿಸಬೇಕಾಗಿದೆ ಎಂದರು.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top