ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ 11 ನೇ ಘಟಿಕೋತ್ಸವ

ಬಳ್ಳಾರಿ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ 11 ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇಬ್ಬರು ಮಹನೀಯರಿಗೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.

ಕೃಷಿ ಕ್ಷೇತ್ರದಲ್ಲಿ ಕವಿತಾ ಮಿಶ್ರಾ, ಸಮಾಜ ಸೇವೆ ಕ್ಷೇತ್ರದಲ್ಲಿ ಮರಣೋತ್ತರವಾಗಿ ಹಿರೇಹಾಳ್ ಇಬ್ರಾಹಿಂ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.  ಮರಣೋತ್ತರವಾಗಿ ಪಡೆದ ಗೌರವ ಡಾಕ್ಟರೇಟ್ ಪದವಿಯನ್ನು ಹಿರೇಹಾಳ್ ಇಬ್ರಾಹಿಂ ಅವರ ಪರವಾಗಿ ಅವರ ಪುತ್ರ ದಾದಾ ಖಲಂದರ್ ಅವರು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.  ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್‍ಗೆ ಆಯ್ಕೆಯಾಗಿದ್ದ ಪಂಡಿತ ಎಂ.ವೆಂಕಟೇಶ್ ಕುಮಾರ್ ಅವರು ಗೈರು ಹಾಜರಾಗಿದ್ದರು.

ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

          ವಿವಿಧ ವಿಭಾಗಗಳ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆದುಕೊಂಡರು. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಒಟ್ಟು 123 ವಿದ್ಯಾರ್ಥಿಗಳಿಗೆ ರ್ಯಾಂಕ್ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

          ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಖನಿಜ ಸಂಸ್ಕರಣ ವಿಭಾಗದ ರುಬಾನ್.ಎಲ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರ ವಿಭಾಗದ ಹಜಿರಾಜಿ.ಎ ಹಾಗೂ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರದ ರುಷಬ್ ಕುಮಾರ್ ಮೆಹ್ತಾ ಇವರುಗಳಿಗೆ 03 ಚಿನ್ನದ ಪದಕ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

 

 

          ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಕನ್ನಡ ವಿಭಾಗದ ಮೋಹನ್‍ಕುಮಾರ್ ಆರ್.ಜಿ,  ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸ್ವಾತಿ.ಎ, ಭೌತಶಾಸ್ತ್ರ ವಿಭಾಗದ ಕಾರ್ತಿಕ್ ರೆಡ್ಡಿ ಹೆಚ್.ಕೆ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಸಮಾಜಶಾಸ್ತ್ರದ ಸುಮಾ ಕಾಯಣ್ಣನವರ ಹಾಗೂ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಬಿಎಸ್‍ಸಿ ವಿಭಾಗದ ವಿಶಾಲಾಕ್ಷಿ ಇವರುಗಳಿಗೆ 02 ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಘಟಿಕೋತ್ಸವದಲ್ಲಿ ಕುಲಸಚಿವರಾದ ಪ್ರೊ.ಎಸ್.ಸಿ.ಪಾಟೀಲ್, ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರಾಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top