ಮೊದಲ‌ ದಿನ 17 ಸಾವಿರ ಮಕ್ಕಳಿಗೆ ‌ಲಸಿಕೆ ನೀಡಿಕೆ

ದಾವಣಗೆರೆ. ಜ;4 : ದಾವಣಗೆರೆ ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಇಂದೂ ಕೂಡ ಮುಂದುವರಿದಿದೆ. ಜಿಲ್ಲೆಯ 532 ಸ್ಥಳಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ಶಾಲಾ ಮಕ್ಕಳು ಮತ್ತು ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.‌ ನಿನ್ನೆ ಒಂದೇ ದಿನ 17 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ಮೀನಾಕ್ಷಿ ಹೇಳಿದ್ದಾರೆ. ಜಿಲ್ಲೆಯಲ್ಲಿ 84 ಸಾವಿರ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ನಾಳೆಯೊಳಗೆ ಈ ಗುರಿ ತಲುಪಲಾಗುವುದು, ಮೊದಲ‌ ಡೋಸ್ ನೀಡಿದ 28 ದಿನಗಳ ಬಳಿಕ ಎರಡನೇ ಡೋಸ್ ನೀಡಲಾಗುವುದು ಎಂದು ಡಾ.ಮೀನಾಕ್ಷಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top