27 July 2024

ರೈಲುಗಳ ಮೂಲಕ ಬೆಂಗಳೂರು ನಗರಕ್ಕೆ ಕುರಿ ಮತ್ತು ಇತರೆ ಪ್ರಾಣಿಗಳ‌ ಮಾಂಸ ಸರಬರಾಜು – ಮಾಧ್ಯಮ ಪ್ರಕಟಣೆ ಕುರಿತು

ಬೆಂಗಳೂರು : 2024ನೇ ಜುಲೈ 26 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ.

ನವೋದ್ಯಮಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ 19 ಸಂಸ್ಥೆ ಗಳಿಗೆ 4 ಕೋಟಿ ರೂ. ಸಹಾಯಧನ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ 2 ಕೋಟಿ ರೂ. ಧನಸಹಾಯ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ

ಶಿವಮೊಗ್ಗ: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಂಟರ್ ಗೆ ಭೇಟಿ ನೀಡಿದ ಸಚಿವ ಪರಮೇಶ್ವರ್

ಬೆಂಗಳೂರು : ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಯಶಸ್ಸು ದೊರೆಯಲಿದೆ

ಬೆಂಗಳೂರು: ಯಾವುದೇ ವಲಯದ ವೃತ್ತಿ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಜ್ಞಾನದ ಮಟ್ಟವನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಂಡಲ್ಲಿ ಮಾತ್ರ ಯಶಸ್ಸು ಸದಾ ನಮ್ಮ ಜೊತೆ ಇರುತ್ತದೆ ಎಂದು ಹ್ಯಾಪಿಯಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಸಿ.ಎ ವೆಂಕಟರಮಣ್ ನಾರಾಯಣನ್ ಹೇಳಿದ್ದಾರೆ.

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ

ಬೆಂಗಳೂರು: ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಬೆಂಗಳೂರಿನಲ್ಲಿ ಪ್ರಕಟಿಸಿದರು.

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು : ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

Translate »
Scroll to Top