ಕೊಪ್ಪಳ,: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದ ಪ್ರವಾಸೋದ್ಯೊಮ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸ್, ಎನ್.ಸಿ.ಸಿ., ಸೇವಾದಳ, ಭಾರತ್ ಸ್ಕೌಟ್ಸ್ ಮತು ಗೈಡ್ಸ್ , ಗೃಹ ರಕ್ಷಕ ದಳದಿಂದ ಪಥ ಸಂಚಲನದ 10 ತುಕಡಿಗಳಿಂದ ಗೌರವವಂದನೆ ಸ್ವೀಕರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ವೇಳೆ ಸಂಸದ ಕರಡಿ ಸಂಗಣ್ಣ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ನಗರಸಭೆ ಅಧ್ಯಕ್ಷರಾದ ಲತಾ ಚಿನ್ನೂರು, ನಗರಾಭಿವೃದ್ಧಿ ಪ್ರಾಧಿಕಾರ ಅದ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ಸೇ ರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.