ಬೆಂಗಳೂರು ; ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು ಎಂದು ಸಿಎಂ ಸೂಚಿದ್ದಾರೆ.ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್ ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್ ಗಳ ಬಳಕೆಯನ್ನು ನಿಷೇಧಿಸಿ ಜಾಹೀರಾತು ಫಲಕಗಳನ್ನು ಬಳಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದ್ದಾರೆ.