ಹುಬ್ಬಳ್ಳಿ

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ -ಬೊಮ್ಮಾಯಿ

ಹುಬ್ಬಳ್ಳಿ : ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣದಲ್ಲಿ ಬೇರೆ ಬೇರೆ ಶಕ್ತಿಗಳ ಹುನ್ನಾರ, ಕುಮ್ಮಕ್ಕು ಏನಿದೆ ಎಂದು ತನಿಖೆಯಾಗುತ್ತಿದೆ. ಈಗಾಗಲೇ ಬಂಧಿಸಿರುವವರಿಂದ ಹೇಳಿಕೆಗಳನ್ನು […]

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ -ಬೊಮ್ಮಾಯಿ Read More »

ಅಂತರರಾಜ್ಯ ಜಲವಿವಾದ

ಹುಬ್ಬಳ್ಳಿ, ಮಾರ್ಚ್ 27: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಂತರರಾಜ್ಯ ಜಲವಿವಾದಗಳ ಶೀಘ್ರವಾಗಿ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕಿದೆ. ಕಾನೂನಾತ್ಮಕ ವಿಚಾರಗಳಲ್ಲಿ ನ್ಯಾಯಾಲಯಗಳಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕಿದೆ. ರೈಲ್ವೆ ಯೋಜನೆಗಳ ಭೂ

ಅಂತರರಾಜ್ಯ ಜಲವಿವಾದ Read More »

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ

ಹುಬ್ಬಳ್ಳಿ, ಮಾರ್ಚ್ 27: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ Read More »

ಏಪ್ರಿಲ್ 05 ಕ್ಕೆ ರಾಜ್ಯಕ್ಕೆ ಪ್ರಧಾನಿಗಳ ಭೇಟಿ

ಹುಬ್ಬಳ್ಳಿ, ಮಾರ್ಚ್ 26: ಏಪ್ರಿಲ್ 05 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಷಾ ಅವರಿಂದ ಕ್ಷೀರ ಅಭಿವೃದ್ಧಿ ಬ್ಯಾಂಕ್ ಉದ್ಘಾಟನೆ, ಇದಲ್ಲದೆ ಏಪ್ರಿಲ್ 01 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು

ಏಪ್ರಿಲ್ 05 ಕ್ಕೆ ರಾಜ್ಯಕ್ಕೆ ಪ್ರಧಾನಿಗಳ ಭೇಟಿ Read More »

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ

ಹುಬ್ಬಳ್ಳಿ, ಮಾರ್ಚ್ 26: ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನಿಷ್ಠನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ Read More »

ಮೌಲ್ಯಗಳ ವರ್ಧನೆಗೆ ಸಕಾರಾತ್ಮಕ ಪಾತ್ರ ನಿರ್ವಹಿಸಿ

ಬೆಂಗಳೂರು, ಮಾರ್ಚ್ 6: ಸಮಾಜದಲ್ಲಿನ ಮೌಲ್ಯಗಳ ಕುಸಿತಕ್ಕೆ ಸಂಬಂಧಿಸಿದಂತೆ ನಿಷ್ಠುರವಾದ ಉದಾಸೀನತೆಯ ಧೋರಣೆ ನಿವಾರಣೆಯಾಗಬೇಕು ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ವಕೀಲರಿಗೆ ಕರೆ ನೀಡಿದ್ದಾರೆ.ಹೈಕೋರ್ಟ್ ಆವರಣದಲ್ಲಿ ಭಾನುವಾರ ವಕೀಲರ ಸಂಘ ಆಯೋಜಿಸಿದ್ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶ್ರೀ ಕಾಗೇರಿ, ಸಮಾಜದಲ್ಲಿ ಮೌಲ್ಯಗಳ ಅಧಃಪತನದಿಂದ ವ್ಯವಸ್ಥೆ ಕುಸಿಯುವ ಅಪಾಯ ನೈಜವಾಗಿದ್ದು, ಈ ಅಪಾಯಕಾರಿ ಪ್ರವೃತ್ತಿಯನ್ನು ತಡೆಯಲು ವಕೀಲರು ಸಕಾರಾತ್ಮಕ ಪಾತ್ರ ನಿರ್ವಹಿಸುವ ಕಾಲ ಬಂದಿದೆ ಎಂದು ತಿಳಿಸಿದರು. “ನೀವು, ವಕೀಲರು ಸದಾ ಸಮಾಜದಲ್ಲಿ

ಮೌಲ್ಯಗಳ ವರ್ಧನೆಗೆ ಸಕಾರಾತ್ಮಕ ಪಾತ್ರ ನಿರ್ವಹಿಸಿ Read More »

ಮೇಕೆದಾಟು ಯೋಜನೆ ಡಿಪಿಆರ್ ಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ

ಹುಬ್ಬಳ್ಳಿ, ಮಾರ್ಚ್ 07: ಮೇಕೆದಾಟು ಯೋಜನೆಯ ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿಗಳು, ಕೇಂದ್ರ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಈ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಈ ಬಾರಿಯ ಅಧಿವೇಶನದ ಸಮಯದಲ್ಲಿ ಸರ್ವ ಪಕ್ಷದ ಸಭೆ ನಡೆಸಲಾಗುವುದು.

ಮೇಕೆದಾಟು ಯೋಜನೆ ಡಿಪಿಆರ್ ಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ Read More »

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲು ಕ್ರಮ

ಹುಬ್ಬಳ್ಳಿ , ಮಾರ್ಚ್, 7 : ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂ ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿಯವರನ್ನು ಬರಮಾಡಿಕೊಂಡ ಮುಖ್ಯಮಂತ್ರಿಯವರು ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ನ ಕಾರ್ಕೀವ್ ನಲ್ಲಿ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಇಂದು ಕನ್ನಡ ನಾಡಿಗೆ ವಾಪಸ್ಸಾಗಿದ್ದಾರೆ. ರಷ್ಯಾ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲು ಕ್ರಮ Read More »

ಸಾಧಕನಿಗೆ ಸಾವು ಅಂತ್ಯವಲ್ಲ

ಹುಬ್ಬಳ್ಳಿ, ಮಾರ್ಚ್ 06 : ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇಶ್ವಾಪೂರದ ಕೆ.ಜಿ. ಗಾರ್ಡನ್ ನಲ್ಲಿ ಆಯೋಜಿಸಿದ್ದ ದಿವಂಗತ ಶ್ರೀ ವೇ.ಮೂ ಕಾಡಯ್ಯ ಗು. ಹಿರೇಮಠ ಅವರ 81ನೇ ಜನ್ಮ ಸಂಸ್ಮರಣ ದಿನಾಚರಣೆ ಪ್ರಯುಕ್ತ ಕಂಚಿನ ಪುತ್ಥಳಿ ಅನಾವರಣ ಮತ್ತು ಸಂಸ್ಮರಣ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದರು. ಸಾವಿನ ನಂತರವೂ ಬದುಕುವವರು ಸಾಧಕರು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಅದರಂತೆಯೇ ಕಾಡಯ್ಯ ಅಜ್ಜ ಬದುಕಿದರು. ಅವರ ಪ್ರೀತಿಯ ಜೊತೆಗೆ

ಸಾಧಕನಿಗೆ ಸಾವು ಅಂತ್ಯವಲ್ಲ Read More »

ಶೀಘ್ರದಲ್ಲಿಯೇ ಮಾದಕವಸ್ತು ವಿಭಾಗ ಸ್ಥಾಪನೆ

ಹುಬ್ಬಳ್ಳಿ,ಮಾರ್ಚ್ 06: ಹುಬ್ಬಳ್ಳಿಯಲ್ಲಿ ಶೀಘ್ರದಲ್ಲಿಯೇ ಮಾದಕ ವಸ್ತುಗಳ ಪತ್ತೆ ವಿಭಾಗವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗೋಕುಲ ರಸ್ತೆಯಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ಪೊಲೀಸ್ ಇಲಾಖೆಯ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಡಿಎನ್‍ಎ, ಸೈಬರ್, ಮೊಬೈಲ್, ದಾಖಲೀಕರಣ ಹಾಗೂ ಆಡಿಯೋ ವೀಡಿಯೋ ವಿಭಾಗಗಳನ್ನು ಈ ಭಾಗದಲ್ಲಿ ತೆರೆಯಲಾಗಿದೆ. ಮಾದಕವಸ್ತುಗಳ ವಿಭಾಗವನ್ನು ಪ್ರಾರಂಭಿಸುವ ಅಗತ್ಯವಿದೆ. ಈಗಾಗಲೇ 80 ಮಂದಿ ವಿಜ್ಞಾನಿಗಳನ್ನು ಆಯ್ಕೆ ಮಾಡಲಾಗಿದೆ. ತರಬೇತಿ ಪಡೆದ ನಂತರ ಹುಬ್ಬಳ್ಳಿ ಮತ್ತು ಬಳ್ಳಾರಿಗೆ

ಶೀಘ್ರದಲ್ಲಿಯೇ ಮಾದಕವಸ್ತು ವಿಭಾಗ ಸ್ಥಾಪನೆ Read More »

Translate »
Scroll to Top