ಹುಬ್ಬಳ್ಳಿ

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಲೋಕಾರ್ಪಣೆ

ಹುಬ್ಬಳ್ಳಿ,ಮಾ,6 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಲೀಂ ಅಹ್ಮದ್, ಮಾಜಿ ಶಾಸಕ ವಿ ಎಸ್ ಪಾಟೀಲ್, ರಾಜ್ಯ ಪೊಲೀಸ್ ಮಹಾ […]

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಲೋಕಾರ್ಪಣೆ Read More »

ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಮಲ್ಲಮ್ಮಾಜಿಯ ಹೆಸರಿಡಿ

ಹುಬ್ಬಳ್ಳಿ ಫೆಬ್ರವರಿ 28: 500 ವರ್ಷಗಳ ಹಿಂದೆಯೇ ಬೆಳವಡಿ ಸಾಮ್ರಾಜ್ಯದಲ್ಲಿ 2 ಸಾವಿರ ಮಹಿಳೆಯರ ಸ್ತ್ರೀ ಸೈನ್ಯ ಕಟ್ಟಿದ್ದ ಬೆಳವಡಿ ಮಲ್ಲಮ್ಮಾಜಿ ಅವರ ಹೆಸರನ್ನ ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಇಡುವ ಮೂಲಕ ಅಪ್ರತಿಮ ವೀರಾಗ್ರಣಿಯ ಹೆಸರನ್ನು ಚಿರಸ್ಥಾಯಿಗೊಳಿಸಬೇಕು. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಇಂದು ವೀರಮಾತೆ ಬೆಳವಡಿ ರಾಣಿ ಮಲ್ಲಮ್ಮಾಜಿ

ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಮಲ್ಲಮ್ಮಾಜಿಯ ಹೆಸರಿಡಿ Read More »

ರಾಜ್ಯದ ಸಾರಿಗೆಯ ಚಿತ್ರಣವನ್ನು ಬದಲಾಯಿಸುವ ಮಹತ್ವಾಕಾಂಕ್ಷೆ ಯೋಜನೆಗಳಿಗೆ ಚಾಲನೆ

ಹುಬ್ಬಳ್ಳಿ,ಫೆಬ್ರವರಿ 28 : ಇಂದು ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಾಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಎಂದು ತಿಳಿಸಿದರು. ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಹಲವಾರು

ರಾಜ್ಯದ ಸಾರಿಗೆಯ ಚಿತ್ರಣವನ್ನು ಬದಲಾಯಿಸುವ ಮಹತ್ವಾಕಾಂಕ್ಷೆ ಯೋಜನೆಗಳಿಗೆ ಚಾಲನೆ Read More »

ನಾಳೆಯಿಂದ ಪ್ರೌಢಶಾಲೆಗಳ ಪುನರಾರಂಭ

ಹುಬ್ಬಳ್ಳಿ, ಫೆಬ್ರವರಿ 13: ನಾಳೆಯಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿವೆ. ತರಗತಿಗಳು ಶಾಂತಿಯುತವಾಗಿ ನಡೆಯುವ ವಿಶ್ವಾಸವಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರೌಢಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಸೌಹಾರ್ದಯುತ ವಾತಾವರಣ ಮೂಡಿಸಲು ಶಾಲೆಗಳಿಗೆ ಭೇಟಿ ನೀಡಬೇಕು. ಹಾಗೂ ಶಾಂತಿ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಪಿಯು, ಪದವಿ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ನಾಳೆಯಿಂದ ಪ್ರೌಢಶಾಲೆಗಳ ಪುನರಾರಂಭ Read More »

ಒಕ್ಕಲುತನ ಹುಟ್ಟುವಳಿ ಸಂಘಕ್ಕೆ ವಿಶೇಷ ಕಾರ್ಯಕ್ರಮ

ಹುಬ್ಬಳ್ಳಿ, ಡಿಸೆಂಬರ್ 25:- ಹುಬ್ಬಳ್ಳಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಶತಮಾನೋತ್ಸವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು. ಅವರು ಇಂದು ಹುಬ್ಬಳ್ಳಿಯ ಅಮರಗೋಳದಲ್ಲಿರುವ ಜಗಜ್ಯೋತಿ ಬಸವೇಶ್ವರ ಎಪಿಎಂಸಿಯಲ್ಲಿ ಆಯೋಜಿಸಲಾಗಿದ್ದ ಹುಬ್ಬಳ್ಳಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಗತವೈಭವ ಮರುಕಳಿಸಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಒಕ್ಕಲುತನ ಹುಟ್ಟುವಳಿ ಸಂಘಕ್ಕೆ ವಿಶೇಷ ಕಾರ್ಯಕ್ರಮ Read More »

Translate »
Scroll to Top