ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರು ಅ.16 ರಂದು ಹೊನ್ನಾಳಿ ತಾಲ್ಲೂಕಿನ ಕುಂದೂರು ಹಾಗೂ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಮುಖಮಂತ್ರಿಗಳ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಮಾನ್ಯ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿಮಾಡಿ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಸುರಹೊನ್ನೆ & ಕುಂದೂರು ಗ್ರಾಮದ ಗ್ರಾಮ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.