ದಾವಣಗೆರೆ: ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ಧಾರೆ. ಲಾರಿಯಲ್ಲಿದ್ದ 148 ಕ್ವಿಂಟಾಲ್ ಅಕ್ಕಿಯನ್ನು ಹಾಗೂ ಒಂದು ಲಾರಿಯನ್ನು ಸೀಜ್ ಮಾಡಲಾಗಿದೆ. ಡಿಸಿಆರ್ ಬಿ ಘಟಕದ ಪೊಲೀಸ್ ಡಿವೈಎಸ್ಪಿ ಬಿ. ಎಸ್ ಬಸವರಾಜ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.