ಕನ್ನಡ ನಾಮಫಲಕ ಕಡ್ಡಾಯ

ಕೊಪ್ಪಳ,: ಕರ್ನಾಟಕ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಾತಾಡ್ ಮಾತಾಡ್ ಕನ್ನಡ (ಕನ್ನಡ ಬರೆಯುವುದು ಹಾಗೂ ಕನ್ನಡ ಮಾತನಾಡುವುದು ಕಡ್ಡಾಯ) ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಕೊಪ್ಪಳ ನಗರದಲ್ಲಿರುವ ಅಂಗಡಿ ಮಾಲೀಕರು ತಮ್ಮ ನಾಮಫಲಕದಲ್ಲಿ ಕನ್ನಡಕ್ಕೆ ಮೊದಲ ಪ್ರಾತಿನಿಧ್ಯವನ್ನು ನೀಡಬೇಕು ಒಂದು ವೇಳೆ ನಾಮಫಲಕಗಳಲ್ಲಿ ಕನ್ನಡ ಪ್ರಕಟಿಸಲು ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಂಗಡಿ ನಾಮಫಲಕಗಳಿಗೆ ಮಸಿ ಬಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೈದರಾಬಾದ್ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ನಾಸೀರ್ ಕಂಠಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕೊಪ್ಪಳ ನಗರದಲ್ಲಿರುವ ಅಂಗಡಿಯ ಮಾಲೀಕರು ತಮ್ಮ ಅಂಗಡಿಗೆ ಅಳವಡಿಸಿದ ನಾಮಫಲಕದಲ್ಲಿ ಕನ್ನಡಕ್ಕೆ ಮೊದಲ ಪ್ರಾತಿನಿಧ್ಯವನ್ನು ನೀಡಬೇಕು. ಕನ್ನಡ ಅಕ್ಷರವು ಸ್ಪಷ್ಟವಾಗಿ ಹಾಗೂ ದೊಡ್ಡ ಗಾತ್ರದಲ್ಲಿರಬೇಕು. ಇಂಗ್ಲೀಷ್ ಭಾಷೆಯನ್ನು ಎರಡನೇ ಆದ್ಯತೆ ನೀಡಬಹುದಾಗಿದೆ. ಅದಕ್ಕೆ ನಮ್ಮದೇ ಯಾವುದೇ ತಕರಾರು ಇರುವುದಿಲ್ಲ. ಒಂದು ವೇಳೆ ಕನ್ನಡ ಅಲ್ಲದೇ ಬೇರೆ ಭಾಷೆಗೆ ಮೊದಲ ಆದ್ಯತೆ ನೀಡಿದ್ದೇ ಆದಲ್ಲಿ ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾರಣ ಎಲ್ಲಾ ಅಂಗಡಿಕಾರರು ತಮ್ಮ ಅಂಗಡಿ ನಾಮಫಲಕದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top