ಕೊಪ್ಪಳ,: ದೇಶಾದ್ಯಂತ ಸೋತು ತಣ್ಣಗಾಗಿರುವ ಕಾಂಗ್ರೆಸ್ ನಾಯಕರು ಹತಾಶೆಯ ಹೇಳಿಕೆ ನೀಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ. ಬಿಜೆಪಿ ಮಾಡಿದ ಕೆಲಸದಿಂದ ಮತ ಕೇಳುತ್ತದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತಾಡುತ್ತಿದ್ದಾರೆ ಎಂದು
ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಕೊಪ್ಪಳದ ನಗರದ ಶ್ರೀಗವಿಮಠಕ್ಕೆ ಭೇಟಿ ನೀಡಿ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಉಪ ಚುನಾವಣೆಯಲ್ಲಿ ಆರ್ ಎಸ್ ಎಸ್ ಬಗ್ಗೆ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಲ್ಪಸಂಖ್ಯಾತರನ್ನು ಒಲೈಕೆ ಮಾಡಲು ಕಾಂಗ್ರೆಸ್‌ನವರು ಬಿಜೆಪಿ ಹಾಗೂ ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆರ್ ಎಸ್ ಎಸ್‌ಗೆ ಹಣ ಎಲ್ಲಿಂದ ಬರುತ್ತೆ ಎಂಬ ಎಚ್ ಡಿಕೆ ಹೇಳಿಕೆಗೆ ಇಂಥ ಕೆಲಸಕ್ಕೆ ಬಾರದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವದಿಲ್ಲ ಎಂದರು ರಾಜಕೀಯವಾಗಿ ಯಡಿಯೂರಪ್ಪ ಅವರನ್ನು ಮುಗಿಸಲು ಕುಟುಂಬದ ಮೇಲೆ ಐಟಿ ದಾಳಿ ಟಾರ್ಗೆಟ್ ಮಾಡಲಾಗಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬವನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಯಡಿಯೂರಪ್ಪ ಪ್ರವಾಸವನ್ನು ಯಾರೂ ಬೇಡ ಎಂದಿಲ್ಲ. ವಿರೋಧ ಪಕ್ಷಗಳ ಇಂಥ ಟೀಕೆಗೆ ಬೆಲೆ ಕೊಡುವ ಅಗತ್ಯ ಇಲ್ಲ ಎಂದರು. ಭಾರತೀಯ ಜನತಾ ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮುಂದೆ ಬರುವ ಸಾರ್ವಜನಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದೇ ಬಿಎಸ್ ಯಡಿಯೂರಪ್ಪ ಅವರ ಗುರಿ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅಮರೇಶ ಕರಡಿ, ಸಿವಿ ಚಂದ್ರಶೇಖರ, ಮಹಾಂತೇಶ ಪಾಟೀಲ,
ವಾಣಿಶ್ರೀ ಮಠದ, ವೀಣಾ ಬನ್ನಿಗೋಳ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.