ಕೊಪ್ಪಳ,: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ದಂದು 66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.
ತೆರದ ವಾಹನದಲ್ಲಿ ಸಚಿವ ಹಾಲಪ್ಪ ಆಚಾರ್ ಅವರು ಪೋಲಿಸರ ಹತ್ತು ತುಕುಡಿಗಳಿಗಂದ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್, ಸೇವಾದಳ,ಎನ್ ಸಿಸಿ ವಿದ್ಯಾರ್ಥಿಗಳ ತುಕಡಿಯಿಂದ ಪಥಸಂಚಲನ ನೆರವೇರಿತು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್.ಪಿ. ಟಿ.ಶ್ರೀಧರ, ಜಿ.ಪಂ ಸಿಇಓ ಫೌಜಿಯಾ ತರನ್ನುಮ , ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರು ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.