ಮತದಾರರ ಜಾಗೃತಿ ಕಾರ್ಯಕ್ರಮ

ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನ ೨೦೨೧, ಚುನಾವಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ, ಜಿಲ್ಲಾ ಸ್ವೀಪ್ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಸಿ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು.


ನಂತರ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ‌ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನ್ನುಮ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

Translate »
Scroll to Top