ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತದೆ: ಡಾ.ವಿದ್ಯಾರಾಣಿ

ದೇವನಹಳ್ಳಿ: ಪ್ರತಿಯೊಂದು ಅಂಗಡಿ ಮುಂಗಟ್ಟುಗಳಲ್ಲಿ ಹೋಟೆಲ್, ಬೇಕರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಎಂದು ನಾಮಫಕ ಹಾಕುವುದು ಖಡ್ಡಾಯವಾಗಿರುತ್ತದೆ ಶಾಲೆಗಳ ಸುತ್ತಮುತ್ತ 93 ಮೀಟರ್ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲಾ ಮಾರಿದರೆ ದಂಡ ವಿಧಿಸುತ್ತದೆ ನಂತರವೂ ಮಾರುವುದು ಮುಂದುವರಿದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರಿನ ಮೂಲಕ ಎಫ್.ಐ.ಆರ್ ದಾಖಲಿಸುವುದಾಗಿ ಜಿಲ್ಲಾ ತಂಬಾಕು ನಿಯಂತ್ರಣಾ ಘಟಕದ ಸಲಹೆಗಾರರಾದ ಡಾ. ವಿದ್ಯಾರಾಣಿ ತಿಳಿಸಿದರು.

ದೇವನಹಳ್ಳಿ ತಾಲ್ಲೂಕು ವಿಜಯಪುರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯ ಪುರಸಭೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ತಂಬಾಕು ನಿಯಂತ್ರಣಾ ಘಟಕದಿಂದ ಧಿಡೀರ್ ದಾಳಿ ನಡೆಸಿ ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆ ಎಂದು ಘೋಷಿಸಲು ಯಾವ ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತಿದೆ. ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಮಾಡಲು ಆಯ್ಕೆ ಮಾಡಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಕನಿಷ್ಟ 200 ರೂ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್, ಪುರಸಭಾ ಸಿಬ್ಬಂದಿ ಜೋಷಿ, ಪೊಲೀಸ್ ಸಿಬ್ಬಂದಿ ವೆಂಕಟೇಶ್ ಹಾಗೂ ಸ್ವಯಂ ಸೇವಕ ಸಂಪತ್, ಇನ್ನು ಹಲವರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top