ಬೆಂಗಳೂರು: ಓಮಿಕ್ರಾನ್ ವೈರಸ್ ಆತಂಕದ ಬೆನ್ನನ್ನೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಮಾತನಾಡಿದ ಸಿಎಂ ಓಮಿಕ್ರಾನ್ ಹೊಸ ತಳಿ ತುಂಬಾ ವೇಗವಾಗಿ ಹರಡುತ್ತಿದೆ ಎಂದು ತಿಳಿದು ಮುನ್ನೆಚ್ಚರಿಕೆಯ ಕ್ರಮವಾಗಿ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲಾಗ್ತಿದೆ.
ಕರ್ನಾಟಕದಲ್ಲಿ ಈ ವೈರಸ್ ಕಂಡುಬಂದಿಲ್ಲ. ಆದರೂ ಮೈಸೂರಿನಲ್ಲಿ ಕಂಟೈನ್ಮೆಂಟ್ ಝೋನ್ ಮಾಡಿ ನಿಗಾ ವಹಿಲಾಗಿದೆ. ಹೊಸ ತಳಿಯ ಮೇಲೆ ಗಮನ ಇಡಲಾಗಿದೆ. ರಾಜ್ಯದಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಲು ಸೂಚಿಸಲಾಗಿದೆ. ಏರ್ ಪೋರ್ಟ್ಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು,ವಿದೇಶಿ ಪ್ರಜೆಗಳಿಗೆ ನೆಗೆಟಿವ್ ಇದ್ದರೆ ಮಾತ್ರ ಒಳಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.