ಮರಿಯಮ್ಮನಹಳ್ಳಿ: ಪಟ್ಟಣದ ಪ್ರಿಯದರ್ಶಿನಿ ಸ್ವತಂತ್ರ ಪ.ಪೂ.ಕಾಲೇಜಿನಲ್ಲಿ ಶುಕ್ರವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಕುರಿತು ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಂವಿಧಾನದ ವಿಷಯಗಳನ್ನಾಧಾರಿತ 4 ಸುತ್ತಿನ ರಸಪ್ರಶ್ನೆಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಣಿ ಅಬ್ಬಕ್ಕ ತಂಡ ಪ್ರಥಮ ಸ್ಥಾನ ಗಳಿಸಿ, ಝಾನ್ಸಿರಾಣಿ ಲಕ್ಷ್ಮಿಬಾಯಿ ತಂಡ ದ್ವಿತೀಯ ಸ್ಥಾನ ಪಡೆಯಿತು. ರಸಪ್ರಶ್ನೆ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ಸೋಮಪ್ಪ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕ ಮಲ್ಲಯ್ಯ ನಡೆಸಿಕೊಟ್ಟರು.
ಇದಕ್ಕೂ ಮುನ್ನ ಸಂವಿಧಾನದ ಪ್ರಸ್ಥಾವನೆಯ ಪ್ರತಿಜ್ಞಾವಿಧಿಯನ್ನು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪಿ.ರಾಮಚಂದ್ರ ಬೋಧಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಂ.ಅಶೋಕ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.