ದೇವನಹಳ್ಳಿ,ಜನವರಿ,20 : ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ “ವೈದರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಜನವರಿ 20 ರಿಂದ ಪುನರಾರಂಭಿಸಲಾಗಿದ್ದು, ವೈದ್ಯಕೀಯ ತಂಡ ಆರೋಗ್ಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕು ಕಚೇರಿ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮಾತನಾಡಿ, ವೈದ್ಯಕೀಯ ತಂಡ ಮನೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ, ಕೋವಿಡ್ ಸೋಂಕಿನ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ವೈದ್ಯಕೀಯ ತಂಡದಲ್ಲಿ ಒಬ್ಬರು ವೈದರು ಸೇರಿದಂತೆ ನರ್ಸಿಂಗ್ ಸಿಬ್ಬಂದಿ, ಲಸಿಕೆ ನೀಡುವ ಸಿಬ್ಬಂದಿ ಹಾಗೂ ಸಹಾಯಕರನ್ನು ಒಳಗೊಂಡಿದ್ದು, ಒಂದು ತಾಲ್ಲೂಕಿಗೆ 15 ತಂಡಗಳಂತೆ ಜಿಲ್ಲೆಯಲ್ಲಿ ಒಟ್ಟು 60 ವೈದ್ಯಕೀಯ ತಂಡಗಳು ಕಾರ್ಯನಿರ್ವಹಿಸಲಿವೆ. ಮುಂದಿನ ಎರಡು ವಾರದ ಗುರಿಯೊಂದಿಗೆ ವೈದ್ಯಕೀಯ ತಂಡವು ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯ ಪಾತ್ರವಹಿಸಲಿವೆ ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಅನಿಲ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಆರೋಗ್ಯ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.