ದಾವಣಗೆರೆ,ಜನವರಿ, 25 : ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಅಮರ್ ಜವಾನ್ ಸ್ಮಾರಕದ 2ನೇ ಹಂತದ ಕಾಮಗಾರಿಯ ಉದ್ಘಾಟನಾ ಸಮಾರಂಭ ಜ.24ರಂದು ನಡೆಯಲಿದೆ ಎಂದು ಜಿಲ್ಲಾ ಮಾಜಿ ಸೈನಿಕರ ಸಂಘದ ಸತ್ಯಪ್ರಕಾಶ್ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 24ರಂದು ಸ್ಮಾರಕದ 2ನೇ ಹಂತದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಉದ್ಘಾಟಿಸುವರು. ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಜಿ.ಎಂ.ಸಿದ್ದೇಶ್ವರ, ದೂಢಾ ಅಧ್ಯಕ್ಷ ದೇವರಮನಿ ಶಿವಕುಮಾರ್, ಶಾಸಕ ಪ್ರೊ.ಎನ್.ಲಿಂಗಣ್ಣ, ಡಾ.ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ದೂಡಾ ಆಯುಕ್ತ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ಮನೋಹರ್ ಮಹೇಂದ್ರಕರ್ ಉಪಸ್ಥಿತರಿದ್ದರು.