ಮನೆಗಳು ತುರ್ತಾಗಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ನೀಡಿ

ಬಳ್ಳಾರಿ, ಫೆ.12 : ವಿವಿಧ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮುಂಡರಗಿ ಆಶ್ರಯ ವಸತಿ ಯೋಜನೆ ಅಡಿಯ ಮನೆಗಳನ್ನು ತುರ್ತಾಗಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸುವಂತೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೂಚನೆ ನೀಡಿದ್ದಾರೆ.


ನಗರದ ಹೊರವಲಯದ ಮುಂಡರಗಿ ಆಶ್ರಯ ವಸತಿ ಬಡಾವಣೆಯಲ್ಲಿ ವಸತಿ ಬಡಾವಣೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಬ್ಯಾಂಕ್ ಸಾಲಸೌಲಭ್ಯ ಪಡೆದ 600ಜನರಿಗೆ ಮೊದಲ ಹಂತದಲ್ಲಿ ಮೂರು ತಿಂಗಳಲ್ಲಿ ಮನೆಗಳನ್ನು ಪೂರ್ಣಗೊಳಿಸಿ‌ ನೀಡಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಹೆಚ್ಚುವರಿ ಹಣವನ್ನು ಮುಖ್ಯಮಂತ್ರಿಗಳು ಮತ್ತು ವಸತಿ ಸಚಿವರೊಂದಿಗೆ ಚರ್ಚಿಸಿ ಸರಕಾರದಿಂದ ಒದಗಿಸಿಕೊಡಲಾಗುವುದು ಎಂದರು.


ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸರಕಾರದ ರೂ.371ಕೋಟಿ ವೆಚ್ಚದಲ್ಲಿ 5616 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.ಎನ್ ಸಿಸಿ ಕಂಪನಿಗೆ ಕಾಮಗಾರಿಯ ಹೊಣೆ ವಹಿಸಲಾಗಿದ್ದು,2019ರಲ್ಲಿ ಕಾಮಗಾರಿ ಪ್ರಾರಂಭವಾಗಿದೆ ಎಂದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಬುಡಾ ಅಧ್ಯಕ್ಷ ಪಾಲನ್ನ,ಮಾಜಿ ಸಂಸದರಾದ ಜೆ.ಶಾಂತಾ,ಸಣ್ಣಫಕೀರಪ್ಪ ಸೇರಿದಂತೆ ಇನ್ನೀತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top