ಬೆಂಗಳೂರು,ಫೆ,14 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲರಾದ ಶ್ರೀ ಥಾವರ ಚಂದ ಗೆಹ್ಲೋಟ್ ಅವರನ್ನು ವಿಧಾನಸೌಧ ಮಹಾ ಮೆಟ್ಟಿಲುಗಳ ಬಳಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.