ಬೆಂಗಳೂರು,ಫೆ.16 : ಹಿಜಾಬ್‌ಗೆ ಸಂಬಂಧ ಪಟ್ಟಂತೆ ಹೈಕೋರ್ಟ್ ಆದೇಶ ಪಾಲಿಸದೆ ಇದ್ದರೆ ಶಿಸ್ತುಕ್ರಮ ಎದುಸಬೇಕಾಗುತ್ತದೆ ಎಂದು ಆರಗ ಜ್ಞಾನೇಂದ್ರ ಖಡಕ್ ಸಂದೇಶ ನೀಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದರು. ಯಾರದೋ ಕುಮ್ಮಕ್ಕಿನಿಂದ ವಿದ್ಯಾರ್ಥಿನಿಯರು ವಿವಾದ ಮಾಡುತ್ತಿದ್ದಾರೆ. ಇನ್ನು ಮುಂದೆ ಯಾರೇ ಆದರೂ ಮುಲಾಜಿಲ್ಲದೆ ಕಾನೂನು ರೀತಿ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವರು ಕಠಿಣ ಎಚ್ಚರಿಕೆ ನೀಡಿದ್ದು ಕೋರ್ಟ್ ಆದೇಶ ಮತ್ತು ಸಂವಿಧಾನವನ್ನು ಮಾನ್ಯ ಮಾಡುವುದು ದೇಶದ ಎಲ್ಲ ನಾಗರಿಕರ ಕರ್ತವ್ಯ. ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲೇಬೇಕು. ಅದನ್ನು ಯಾವುದೇ ಕಾರಣಕ್ಕೂ ಆದೇಶ ಉಲ್ಲಂಘನೆಯನ್ನು ಸಹಿಸುವುದಿಲ್ಲ. ಕೋರ್ಟ್ ಆದೇಶವನ್ನು ಉಲ್ಲಳಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.