ದಾವಣಗೆರೆ,ಫೆ,26 : ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಫೆ.28 ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ.11ಕ್ಕೆ ಹೊನ್ನಾಳಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ ಹೊನ್ನಾಳಿ ಪಟ್ಟಣದಲ್ಲಿ ಹೊನ್ನಾಳಿ ನೂತನ ಕಂದಾಯ ಉಪ ವಿಭಾಗದ ಉಪ ವಿಭಾಗಾಧಿಕಾರಿ ಕಛೇರಿ ಉದ್ಘಾಟನಾ ಸಮಾರಂಭ ಹಾಗೂ ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಸುತ್ತುನಿಧಿ ಚೆಕ್ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಾ.02ಕ್ಕೆ ಹೊನ್ನಾಳಿ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಕುಂಚಿಟಿಗ ಸಮುದಾಯ ಭವನದ ಭೂಮಿ ಪೂಜಾ ಸಮಾರಂಭ ಹಾಗೂ ಇತರೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಅದೇ ದಿನ ಮಾ.03ಕ್ಕೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.