ದಾವಣಗೆರೆ : ರಾಜ್ಯ ವಿಧಾನಸಭೆಗೆ ಅವಧಿಗೂ ಮುನ್ನವೇ ಚುನಾವಣೆ ನಡೆಸುವ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ,ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ದಾವಣಗೆರೆಯಲ್ಲಿಂದು ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,2023 ರ ವಿಧಾನಸಭಾ ಚುನಾವಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಪಕ್ಷ ಮಾಡಿಕೊಳ್ಳಲಾಗುತ್ತಿದೆ ಎಂದರು.
ಚುನಾವಣೆ ಬಗ್ಗೆ ಕೇಂದ್ರನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರು ಕೊಟ್ಟಿರುವ 150 ಸ್ಥಾನಗಳನ್ನ ಬರುವ ಚುನಾವಣೆಯಲ್ಲಿ ಗೆಲ್ಲಲುಬೇಕಾದ ಕಾರ್ಯತಂತ್ರಗಳನ್ನ ರೂಪಿಸಲಾಗುತ್ತಿದೆ ಎಂದರು. ನಂತರ ನಡೆದ ಕಾರ್ಯ ಕರ್ತರ ಸಮಾವೇಶದಲ್ಲಿ ಸಚಿವರಾದ ಆರ್.ಆಶೋಕ, ಬೈರತಿ ಬಸವರಾಜ್, ಗೋವಿಂದ ಕಾರಜೋಳ ಇತರರು ಉಪಸ್ಥಿತರಿದ್ದರು.