ಬೆಂಗಳೂರು : PSI ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ. ತಮ್ಮ ಬಳಿ ಅಕ್ರಮಕ್ಕೆ, ಸಂಬಂಧಿಸಿದಂತೆ ಒಂದು ತಿಂಗಳ ಹಿಂದೆಯೇ, ತಮಗೆ ಸಲ್ಲಿಕೆ ಯಾಗಿದೆ, ಎನ್ನಲಾದ, ಒಂದು ಆಡಿಯೋ ರೆಕಾರ್ಡ್, ಅನ್ನು, ಖರ್ಗೆಯವರು, ಇಂದು ಬಿಡುಗಡೆ ಮಾಡಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ, ನ್ಯಾಯ ಒದಗಿಸಲು, ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿ, ಮುಖ್ಯಮಂತ್ರಿಗಳ ಜತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ. ಆ ನಂತರ ಮಾನ್ಯ ಖರ್ಗೆಯವರು ಈ ಕುರಿತು ಒಂದು, ಪತ್ರಿಕಾ ಗೋಷ್ಟಿ ಸಹ ನಡೆಸಿದ್ದರು, ಆದರೆ ಆಡಿಯೋ ರೆಕಾರ್ಡ್ ಬಗ್ಗೆ, ಮಾಹಿತಿ ನೀಡಿರಲಿಲ್ಲ.
ಈಗ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರ ಹಾಕಿದ್ದಾರೆ. ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆ ಯಲ್ಲಿ, ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು. ಈಗಲಾದರೂ, ಖರ್ಗೆಯವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು, ಹಾಗೂ ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು, ಎಂದು ವಿನಂತಿಸುತ್ತೇನೆ. ತನಿಖೆಯು ನಿಷ್ಪಕ್ಷಪಾತವಾಗಿ, ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು, ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ನಾಯಕರು, ತನಿಖೆಗೆ ಸಹಕರಿಸಬೇಕು ಹಾಗೂ, ಯಾವುದೇ ರೀತಿಯ ರಾಜಕೀಯ ಲಾಭ ಅಪೇಕ್ಷೆ ಮಾಡದೆ, ಅಕ್ರಮ ಎಸಗಿದ ವರನ್ನು, ಕಾನೂನಿನ ಬಲೆಗೆ ತರಲು ಮುಂದಾಗಬೇಕು.
ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.