ಬಳ್ಳಾರಿ: ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕøತ, ಕರ್ನಾಟಕ ರತ್ನ, ನಟ ಸಾರ್ವಭೌಮ ಡಾ.ರಾಜ್‍ಕುಮಾರ ಜಯಂತಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಹೊನ್ನಮ್ಮ ಅವರು ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಸಣ್ಣ ಉಳಿತಾಯ ಮತ್ತು ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರರಾದ ರವೀಂದ್ರಬಾಬು ಹಾಗೂ ಕಚೇರಿ ಸಿಬ್ಬಂದಿ ಇದ್ದರು.