ವರನಟ ಡಾ.ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿಂದು ರಾಜ್ ಸಮಾಧಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಪುಷ್ಪ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಮುನಿರತ್ನ, ನೆ.ಲ.ನರೇಂದ್ರ ಬಾಬು, ಬಿಜೆಪಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರಕುಮಾರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.