ಹುಬ್ಬಳ್ಳಿ,: ಮಾತೃಭಾಷೆಗಳೇ ಸಾರ್ವಭೌಮ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಅಜಯ ದೇವಗನ್ ಅವರ ಟ್ವೀಟ್ ಗೆ ಸುದೀಪ್ ಅವರು ಪ್ರತಿಯಾಗಿ ಟ್ವೀಟ್ ಮಾಡಿರುವುದು ಸರಿ ಇದೆ. ನಮ್ಮ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾದ ಮೇಲೆ ಆ ರಾಜ್ಯ ಗಳಲ್ಲಿ ಮಾತೃಭಾಷೆಗಳಿಗೆ ಪ್ರಾಧ್ಯಾನ್ಯತೆ ಇದೆ. ಅದೇ ಸಾರ್ವಭೌಮ. ಇದನ್ನು ಎಲ್ಲರೂ ಮನಗಂಡು ಗೌರವಿಸಬೇಕು ಎಂದು ಸಿಎಂ ಹೇಳಿದರು.