ಬೆಂಗಳೂರು: PSI ನೇಮಕಾತಿಗೆ ಕಳೆದ ಆಗಸ್ಟ್ ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದು ತನಿಖೆ ನಡೆಸಿ ಪ್ರಮುಖ ಆರೋಪಿಗಳನ್ನು ಶುಕ್ರವಾರ ಬಂಧಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 545 PSI ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯನ್ನು ಸಂಪೂರ್ಣ ರದ್ದುಪಡಿಸಿ ಈಗ ಮತ್ತೊಮ್ಮೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.