ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ -ಬೊಮ್ಮಾಯಿ

ಬೆಂಗಳೂರು : ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗುವುದು. ಯುವಕರಿಗೆ ಉದ್ಯೋಗ ನೀಡುವ ಮೂಲಕ ಸ್ವಾಭಿಮಾನದ ಸ್ವಾವಲಂಬಿ ಬದುಕು ನಡೆಸಲು ಅನುವು ಮಾಡಿಕೊಡಬೇಕು. ಚರ್ಮೋದ್ಯಮದ ಆಧುನೀಕರಣದಲ್ಲಿ ದೊಡ್ಡ ಬದಲಾವಣೆ ಆಗಿದೆ. ಅಂತರರಾಷ್ಟ್ರೀಯ ಮಟ್ಟದ ವಿನ್ಯಾಸವಿರುವ ಪೀಠೋಪಕರಣಗಳು ಪ್ರದರ್ಶನದಲ್ಲಿ ಲಭ್ಯವಿದೆ. ಪೀಠೋಪಕರಣ ಉದ್ಯಮ ವಿಸ್ತಾರವಾದದ್ದು, ಅವುಗಳಿಗೆ ಬ್ರ್ಯಾಡಿಂಗ್ ಮಾಡುವ ಉತ್ತಮ ಬೆಲೆ ಹಾಗೂ ಮಾರುಕಟ್ಟೆ ಸಿಗುತ್ತದೆ. ಈ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಲಹೆ ನೀಡಿದರು.

33000 ಉದ್ಯಮಗಳಿಗೆ ಸಹಾಯ:
ಚರ್ಮೋದ್ಯಮ ಅನಾದಿಕಾಲದಿಂದಲೂ ಇದೆ. ಚರ್ಮ ಕುಶಲಕರ್ಮಿಗಳು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮುಂದುವರಿಯಬೇಕು. ಇದಕ್ಕಾಗಿ ಚರ್ಮೋದ್ಯಮದಲ್ಲಿ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳನ್ನು ಬಳಸುವ ಮೂಲಕ ಚರ್ಮದ ಉತ್ಪನ್ನ ಹಾಗೂ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬೇಕು. ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಇತತರಿಗೆ ಪ್ರೇರಣೆಯನ್ನು ನೀಡುವಂತೆ ಬಾಳಬೇಕು. ಈ ದಿಸೆಯಲ್ಲಿ ಲಿಡ್ಕರ್ ಪಾತ್ರ ದೊಡ್ಡದಿದೆ. ಚರ್ಮೋದ್ಯಮದಲ್ಲಿ ಉದ್ಯೋಗ, ಉತ್ಪಾದನೆಗಳನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಲಿಡ್ಕರ್ ನಿಗಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಲಿಡ್ಕರ್ ಸಂಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸೇರಿಸಿ ಕಳೆದ ಐದು ವರ್ಷಗಳಿಂದ 237 ಕೋಟಿ ರೂ. ಅನುದಾನ ಒದಗಿಸುವ ಮೂಲಕ 33000 ಉದ್ಯಮಗಳಿಗೆ ಸಹಾಯವನ್ನು ಮಾಡಲಾಗಿದೆ ಎಂದರು.

ಯುವಕರಿಗೆ ಉದ್ಯೋಗ ಸೃಷ್ಟಿ ಆದ್ಯತೆ :
ಎಸ್ ಸಿ, ಎಸ್ ಟಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪರಿಶಿಷ್ಟ ಜಾತಿಯವರು ಜಮೀನು ಖರೀದಿಗೆ ಇದ್ದ 15 ಲಕ್ಷ ಅನುದಾನವನ್ನು 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿಯ 30 ಲಕ್ಷಕ್ಕಿಂತ ಹೆಚ್ಚಿನ ಮನೆಗಳಿಗೆ 75 ಲಕ್ಷ ಯೂನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ವಿನೂತನ ಕಾರ್ಯಕ್ರಮ ಪ್ರಾರಂಭಿಸಲಾಗಿಗೆ. ಶಿಕ್ಷಣ, ಉದ್ಯೋಗ, ಸಬಲೀಕರಣ ನೀತಿಯ ಆಧಾರದ ಮೇಲೆ ಕೆಲಸ ಮಾಡಲಾಗುತ್ತಿದೆ. ಎಸ್ ಸಿ, ಎಸ್ ಟಿ, ಓಬಿಸಿ ಜನಾಂಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ 1000 ಕೊಠಡಿಗಳ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುವುದು. ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ, ಯುವಕರಿಗೆ ಉದ್ಯೋಗ ಸೃಷ್ಟಿ ಆದ್ಯತೆ ನೀಡಲಾಗಿದೆ. ಸರ್ಕಾರದ ಸಾಲ ಸೌಲಭ್ಯದ ಯೋಜನೆಗಳು ಜನರಿಗೆ ಒದಗಿಸಲು ಜಿಲ್ಲೆಗೊಂದಂತೆ ಆಂಕರ್ ಬ್ಯಾಂಕ್ ಮಾಡಲು ಆದೇಶ ನೀಡಲಾಗಿದೆ ಎಂದರು.

Leave a Comment

Your email address will not be published. Required fields are marked *

Translate »
Scroll to Top