ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ: ಬಿಜೆಪಿ ಶಾಸಕ ಸುನೀಲ್ ಕುಮಾರ್

Kannada Nadu
ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ: ಬಿಜೆಪಿ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ಆರು ಮಂದಿ ನಕ್ಸಲರಿಗೆ ರಾಜ್ಯ ರ‍್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ರ‍್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ರ‍್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌರ‍್ಯ ಎಲ್ಲವೂ ಸಿಗುತ್ತದೆ ಎಂದು ಟೀಕಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ರ‍್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥರ‍್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";