ಬಳ್ಳಾರಿ: ಪೊಕ್ಸೋ ಅರೋಪಿ ಕಾಲಿಗೆ ಗುಂಡೇಟು

Kannada Nadu
ಬಳ್ಳಾರಿ: ಪೊಕ್ಸೋ ಅರೋಪಿ ಕಾಲಿಗೆ ಗುಂಡೇಟು

ಬಳ್ಳಾರಿ: ಅಪರಾಧ ಸ್ಥಳಕ್ಕೆ ಕರೆದೊಯ್ಯುವಾಗ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯೊಬ್ಬನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿ ಗುರುವಾರ ನಡೆದಿದೆ.

ಪೊಲೀಸರ ಪ್ರಕಾರ, ಸ್ಥಳ ಮಹಜರು ನಡೆಸಲು ಅಪರಾಧ ಸ್ಥಳಕ್ಕೆ ಕರೆತಂದಾಗ ಆರೋಪಿಯು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಸಿದ್ದಾನೆ. ಆಗ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಆರೋಪಿಯನ್ನು ಕಮಲಾಪುರದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಬಿಮ್ಸ್)ಗೆ ದಾಖಲಿಸಲಾಗಿದೆ. ಆರೋಪಿ

ಮಂಜುನಾಥ ಇತ್ತೀಚೆಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ. ದೂರು ಪಡೆದ ಪೊಲೀಸರು ಮೂರು ತಂಡಗಳನ್ನು ರಚಿಸಿ ಕೊಪ್ಪಳ ಜಿಲ್ಲೆಯ ಹುಲಗಿಯಲ್ಲಿ ಮಂಜುನಾಥನನ್ನು ಬಂಧಿಸಿದ್ದರು. ತನಿಖೆಗಾಗಿ ಆರೋಪಿಯನ್ನು ಅಪರಾಧ ಸ್ಥಳಕ್ಕೆ ಕರೆತಂದಾಗ, ಆತ ಪೊಲೀಸ್ ಪೇದೆ ರಘುಪತಿ ಎಂಬುವವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದಾಕೇಶ್ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ತಿಳಿಸಿದ್ದಾರೆ.

ಜನವರಿ 13ರಂದು ಮದ್ಯದ ಅಮಲಿನಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದನು. ಬಾಲಕಿಯು ಮನೆ ಮುಂದೆ ಆಟವಾಡುತ್ತಿದ್ದಾಗ ಆರೋಪಿ ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ. ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವಿಗೆ ಆಂತರಿಕ ಗಾಯಗಳು ಮತ್ತು ತೀವ್ರ ರಕ್ತಸ್ರಾವವಾಗಿತ್ತು. ಬಾಲಕಿಯನ್ನು ಪತ್ತೆ ಹಚ್ಚಿದ ಜನರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ.
ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ದಾಖಲಿಸಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";