ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಸಿನಿಮಾ ‘ಮಾಫಿಯಾ’. ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ ಸಂದರ್ಭದಲ್ಲಿ ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಶುಭಾಶಯ ಕೋರಿದೆ.
ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿರುವ ಈ ಚಿತ್ರವನ್ನು ಆಗಸ್ಟ್ ನಲ್ಲಿ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವಾಗಿದೆ ‘ಮಾಫಿಯಾ’. ‘ಮಾಫಿಯಾ’ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅವರ ನಟನೆಯ ಮೂವತ್ತೈದನೇ ಚಿತ್ರವೂ ಹೌದು. ಈ ಚಿತ್ರದಲ್ಲಿ ಮೂರು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿದೆ. ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.