ಬೆಂಗಳೂರು: ಶರಣ ಸಂಶೋಧಕ ಅಶೋಕ್ ದೊಮ್ಮಲೂರು, ರಂಗಭೂಮಿ ಕಲಾವಿದ ಮೈಲಾರಿ ಮಡಿವಾಳ, ಗೋ ರಕ್ಷಕ ಮಹೇಂದ್ರ ಮುಡೋತ್ ಜೈನ್ ಸೇರಿದಂತೆ ಹಲವು ಮಂದಿ ಮಡಿವಾಳ ಮಾಚಿದೇವರ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದೇ ತಿಂಗಳ 16 ರಂದು ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ ದೀಪಕ್ ತಿಳಿಸಿದ್ದಾರೆ.
ನಗರದ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ ಮಡಿವಾಳ ಮಹಾಮಠದ ಮುಕ್ತಾನಂದ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಮಾಜ ಸೇವಕ ಡಾ. ಶ್ರೀಧರ್, ಪಶು ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಡಾ|| ಡಿ.ಎಂ. ಪ್ರಸಾದ್ ಅವರಿಗೂ ಸಹ ಮಡಿವಾಳ ಮಾಚಿದೇವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅತಿ ಹೆಚ್ಚು ಅಂಕ ಪಡೆದ ಮಡಿವಾಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪರುಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.