ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದ ವರಿಷ್ಠರಿಗೆ ಯಾವುದೇ ದೂರು ನೀಡಿಲ್ಲ : ಆರ್. ಅಶೋಕ

Kannada Nadu
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದ ವರಿಷ್ಠರಿಗೆ ಯಾವುದೇ ದೂರು ನೀಡಿಲ್ಲ : ಆರ್. ಅಶೋಕ

ಬೆಂಗಳೂರು: ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದ ವರಿಷ್ಠರಿಗೆ ಯಾವುದೇ ದೂರು ನೀಡಿಲ್ಲ. ಆದರೂ ದೂರು ನೀಡಿದ್ದೇನೆ ಎಂದು ಬಿಂಬಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್, ಅಶೋಕ ಇಂದಿಲ್ಲಿ ಹೇಳಿದ್ದಾರೆ.
ಒಕ್ಕಲಿಗರು ಪ್ರತ್ಯೇಕವಾಗಿ ಸಭೆ ಮಾಡಿಲ್ಲ ಅಥವಾ ಗುರುತಿಸಿಕೊಂಡಿಲ್ಲ. ಇದು ಕೂಡ ಸುಳ್ಳು ಸುದ್ದಿ” ”ನಮ್ಮಲ್ಲಿ ಯಾವುದೇ ಟೀಮ್ ಇಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಗೊಂದಲ ಇರುವುದು ನಿಜ. ಪಕ್ಷದ ನಾಯಕರಾದ ಶ್ರೀರಾಮುಲು, ಜನರ್ದ್ನರೆಡ್ಡಿ ಜೊತೆ ರ್ಚಿ ಸುತ್ತೇವೆ ಎಂದು ಹೇಳಿದ್ದಾರೆ.
ನಾಯಕರಲ್ಲಿರುವ ಗೊಂದಲ ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ರ್ಚಿ ಸಲಿದ್ದೇವೆ” ಎಂದು ಹೇಳಿದ್ದಾರೆ.
ಲೋಕಾಯುಕ್ತರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ ಮಾಡಲಾಗಿದೆ. ”ಮುಡಾ ಹಗರಣದಲ್ಲಿ ಜಾರಿ ನರ್ದೇ ಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ಧಾರೆ.
”ಕಾಂಗ್ರೆಸ್ ರ್ಕಾಡರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ ೪ ರಿಂದ ೫ ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೧೪ ಸೈಟು ವಾಪಸ್ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ ಎಂದಿದ್ದಾರೆ.
ಜಾರಿ ನರ್ದೇಿಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರಿ. ”ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ, ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ” ಎಂದು ಹೇಳಿದರು.

ಕ್ಲೀನ್ ಚಿಟ್ ಸಿಗುವುದು ಖಚಿತ:

ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಗುವದು ಖಚಿತ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ
”ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾ ರದ ಅಡಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ರ್ಗಾ ವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡುವುದು ಖಚಿತ” ಎಂದು ಹೇಳಿದರು.
”ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವುದು ಖಚಿತ. ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";