ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಮತ್ತು ಭಾರತೀಯ ಜನಸಂಘದ ಹಿರಿಯ ನಾಯಕ, ‘ಕರ್ನಾಟಕ ಕೇಸರಿ’ ಜಗನ್ನಾಥರಾವ್ ಜೋಶಿ ಅವರ ಪುಣ್ಯತಿಥಿ ಅಂಗವಾಗಿ ಇಂದು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಅವರಿಗೆ ಗೌರವ ಸಮರ್ಪಣೆ ಮಾಡಲಾಯಿತು ಹಾಗೂ ಪುಷ್ಪನಮನ ಸಲ್ಲಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಹಾಗೂ ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜೋಶಿ ಅವರು ದೇಶಕ್ಕಾಗಿ ಮತ್ತು ಪಕ್ಷಕ್ಕಾಗಿ ತಮ್ಮನ್ನೇ ತಾವು ಸಮರ್ಪಿಸಿಕೊಂಡ ಹಿರಿಯ ಭಾರತೀಯ ರಾಜಕಾರಣಿ ಎಂದು ಪಕ್ಷದ ಪ್ರಮುಖರು ತಿಳಿಸಿದರು.
Facebook
Twitter
LinkedIn
WhatsApp
Email
Telegram