ವರ್ಷ ಪೂರ ನರಸಿಂಹರಾಜು ಜನ್ಮ ಶತಮಾನೋತ್ಸವ

                ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳದಿರುವವರು ಖ್ಯಾತ ಹಾಸ್ಯ ನಟ ದಿ. ಟಿ ಆರ್ ನರಸಿಂಹರಾಜು. ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ನರಸಿಂಹರಾಜು ಜನ್ಮ‌ ಶತಮಾನೋತ್ಸವ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ. 

ಈ ಕಾರ್ಯಕ್ರಮಗಳಲ್ಲಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ. ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ(ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಿ, ಆ ಕಾರ್ಯಕ್ರಮದಲ್ಲಿ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವದ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ.

ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ). ಆಯೋಜಿಸಲಾಗುವುದು.

 

     ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಈಗಲೂ ನಾಟಕ ಕಂಪನಿಗಳಿದೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸುವ ಯೋಜನೆಯಿದೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮಗಳ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಯುತ್ತಿದೆ . ಈ ಎಲ್ಲಾ ಕಾರ್ಯಕ್ರಮಗಳಿಗೆ ಜುಲೈ 24 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು, ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ಪ್ರಕಟಣೆಯಲ್ಲಿ  ತಿಳಿಸುತ್ತಿದ್ದಾರೆ

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top