ಡಾ. ಎಚ್.ಸಿ. ಮಹದೇವಪ್ಪ ಅವರಿಂದ ಆದೇಶ ಪತ್ರ ಪಡೆದು 208 ದಿನಗಳ ಅಹೋರಾತ್ರಿ ಹೋರಾಟ ಕೈಬಿಟ್ಟ ಪ್ರತಿಭಟನಾಕಾರರು
ಬೆಂಗಳೂರು : ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ 208 ದಿನಗಳಿಂದ ನಡೆಸುತ್ತಿದ್ದ ಎಸ್.ಸಿ, ಎಸ್.ಟಿ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟಕ್ಕೆ ಕೊನೆಗೂ ಗೆಲುವು ದಕ್ಕಿದೆ. ಅಹೋರಾತ್ರಿ ಹೋರಾಟ ನಡೆಸುತ್ತಿರುವವರಿಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಆದೇಶ ಪತ್ರ ನೀಡಿದ ಹಿನ್ನೆಲೆಯಲ್ಲಿ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾಕಾರರನ್ನು ಭೇಟಿಯಾದ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸರ್ಕಾರ ದಲಿತ ಸಮುದಾಯದ ಹಿತ ರಕ್ಷಣೆಗೆ ಬದ್ಧವಾಗಿದ್ದು, ವಿಶೇಷವಾಗಿ ಭೂಮಿ ರಕ್ಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಮೊದಲ ಹಂತದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ. ಶತಶತಮಾನಗಳಿಂದ ಶೋಷಣೆಗೆ ಒಳಗಾದವರಿಗೆ ಮರು ಬದುಕುಕಟ್ಟಿಕೊಳ್ಳಲು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. 2017 ರಲ್ಲಿ ಸರ್ವೋಚ್ಚ ನ್ಯಾಯಾಲಯ ನೆಕ್ಕಂಟಿರಾಮಲಕ್ಷ್ಮಿ ಹಾಗೂ ಕರ್ನಾಟಕ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನಿಂದ ಲಕ್ಷಾಂತರ ಕುಟುಂಬಗಳ ಭೂಮಿ ಕೈ ತಪ್ಪಿದರಿಂದ ಇಡೀ ಸಮುದಾಯ ಭೂಮಿಗಳನ್ನು ಕಳೆದುಕೊಂಡು ಬೀದಿಪಾಲಾಗಿ ತಮ್ಮ ಜೀವನವೇ ಕಳೆದುಕೊಂಡಿದ್ದರು. 6 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಸಮುದಾಯವನ್ನು ದಾರಿ ತಪ್ಪಿಸಿತ್ತು ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ತಿಳಿಸಿದರು.