ಈ ಬಾರಿ ಎಷ್ಟು ಸಾಲ ಮಾಡಲಿದ್ದೀರಿ ಎಂಬ ಆತಂಕದಲ್ಲಿ ಜನರಿದ್ದಾರೆ: ಸಿಎಂಗೆ ವಿಜಯೇಂದ್ರ ಬಹಿರಂಗ ಪತ್ರ

Kannada Nadu
ಈ ಬಾರಿ ಎಷ್ಟು ಸಾಲ ಮಾಡಲಿದ್ದೀರಿ ಎಂಬ ಆತಂಕದಲ್ಲಿ ಜನರಿದ್ದಾರೆ: ಸಿಎಂಗೆ ವಿಜಯೇಂದ್ರ ಬಹಿರಂಗ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16 ನೇ ಬಜೆಟ್‌ನ ಮಂಡನೆಗೆ ಸಿದ್ದರಾಗುತ್ತಿದ್ದಾರೆ. ಬಜೆಟ್ ಮಂಡಿಸುವ ಪೂರ್ವದಲ್ಲಿ ಸಿಎಂ ಅವರಿಗೆ ಬಹಿರಂಗ ಪತ್ರ ಬರೆದಿರುವ ವಿಜಯೇಂದ್ರ ಅವರು, “ಈ ಬಾರಿಯ ಬಜೆಟ್ ಸುಸ್ಥಿರ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ವಿವೇಚನಾಯುಕ್ತ ಹಣಕಾಸು ನಿರ್ವಹಣೆಗೆ ಅಡಿಪಾಯ ಹಾಕುತ್ತದೆ ಎಂದು ಭಾವಿಸುತ್ತೇನೆ. ಈ ಮಹತ್ವದ ಪ್ರಯತ್ನದಲ್ಲಿ ನಿಮಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ” ಎಂದು ಶುಭ ಕೋರುವ ಜೊತೆಗೆ ರಾಜ್ಯ ಸರ್ಕಾರದ ವಿಫಲತೆಗಳ ಬಗ್ಗೆ ಹಾಗೂ ಬಜೆಟ್ ನ ನಿರೀಕ್ಷೆಗಳ ಕುರಿತು ಬರೆದು ಸಿಎಂ ಸಿದ್ದರಾಮಯ್ಯ ಅವರಿಗೆ ಒಂದುರೀತಿಯಲ್ಲಿ ಟಾಂಗ್ ನೀಡಿದ್ದಾರೆ.

“ಈ ಬಾರಿಯ ಬಜೆಟ್‌ನಲ್ಲಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿAದ ನೋಡುತ್ತಿದ್ದಾರೆ. ನೌಕರರಿಗೆ ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ, ಗುತ್ತಿಗೆದಾರರ ಬಾಕಿ ಪಾವತಿಸಲಾಗದ ದಾರುಣ ಸ್ಥಿತಿಗೆ ಕರ್ನಾಟಕವನ್ನು ತಂದು ನಿಲ್ಲಿಸಿದ ಅಪಕೀರ್ತಿಗೆ ತಾವು ಗುರಿಯಾಗಬಾರದು. 16ನೇ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆರ್ಥಿಕವಾಗಿ ಜವಾಬ್ದಾರಿಯುತ, ಅಭಿವೃದ್ಧಿ ಆಧಾರಿತ ಮಾರ್ಗಸೂಚಿ ಮಂಡಿಸಲು ಒಂದು ಅವಕಾಶವಿದೆ ತಾವು ಮಂಡಿಸಲಿರುವ ಬಜೆಟ್ ಈ ಆದ್ಯತೆಗಳನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.
“ಎರಡನೇ ಬಾರಿಗೆ ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರ ಚರ್ಚೆ ಆರಂಭಿಸಿರುವುದನ್ನು ವಿರೋಧಿಸುತ್ತೇನೆ. ದರ ನಿಗದಿ ಆಯೋಗಕ್ಕೆ ರಾಜ್ಯ ಸರ್ಕಾರ ಪತ್ರ ಬರೆಯದೇ ಇದ್ದಲ್ಲಿ ಮೆಟ್ರೋ ದರ ಏರಿಕೆ ಸಂದರ್ಭವೇ ಬರುತ್ತಿರಲಿಲ್ಲ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಗ್ಯಾರಂಟಿಯ ಯೋಜನೆಗಳು ಜನರಿಗೆ ತಲುಪುವಲ್ಲಿ ವಿಫಲ
“ಬಿಟ್ಟಿ ಭಾಗ್ಯಗಳಲ್ಲಿ ಒಂದಾದ ಗೃಹ ಜ್ಯೋತಿ ನಂದಿಸಲು ಎಸ್ಕಾಂಗಳು ಸನ್ನದ್ಧವಾಗಿವೆ. 15 ಬಾರಿ ಬಜೆಟ್ ಮಂಡಿಸಿರುವ ದಾಖಲೆ ತಮ್ಮದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಿಟ್ಟಿ ಭಾಗ್ಯಗಳಿಗೆ ಹಣ ಸರಿದೂಗಿಸಲು ಸಮತೋಲನ ಕಳೆದುಕೊಂಡಿರುವುದು ಅವರು ಅಧಿಕಾರಕ್ಕೆ ಬಂದ ದಿನದಿಂದಲೂ ಅನಾವರಣಗೊಳ್ಳುತ್ತಿದೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಆರ್ಥಿಕ ದೂರದೃಷ್ಟಿತ್ವವಿಲ್ಲದ, ಬದ್ಧತೆಯಿಲ್ಲದ ಮತ ಬ್ಯಾಂಕ್ ಆಧಾರಿತ ಯೋಜನೆಗಳು ಸೊರಗುತ್ತಿದೆ, ಅಭಿವೃದ್ಧಿ ಎನ್ನುವುದು ಗಗನಕುಸುಮವಾಗಿದೆ, ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಇದರ ನಡುವೆ ಪಂಚ ಗ್ಯಾರಂಟಿಯ ಯೋಜನೆಗಳು ತೋರಿಕೆಗೆ, ಹೇಳಿಕೆಗೆ ಮಾತ್ರ ಎಂಬAತೆ ಜನರಿಗೆ ತಲುಪುವಲ್ಲಿ ಬಹುತೇಕ ವಿಫಲವಾಗಿವೆ” ಎಂದಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯ ಹಣ ಸ್ಥಗಿತಗೊಂಡAತೆ ಕಾಣುತ್ತಿದೆ, ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರದ ಪ್ರಧಾನಿ ನರೇಂದ್ರ ಮೋದಿಜೀ ಅವರ ಸರ್ಕಾರ ಕೊಡುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯ 5 ಕೆಜಿ ಅಕ್ಕಿಯ ಹೊರತುಪಡಿಸಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಹೆಚ್ಚುವರಿ 5 ಕೆಜಿಯ ಅಕ್ಕಿಯೂ ಇಲ್ಲ, ಬದಲಾಗಿ ಹಣವೂ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿಲ್ಲ. ಯುವ ನಿಧಿ ಯೋಜನೆ ಅರ್ಜಿ ಕರೆಯುವ ಪ್ರಕಟಣೆಗಳನ್ನು ಬಿಟ್ಟರೆ ಯುವಜನರ ಖಾತೆಗಳಿಗೆ ಜಮೆಯಾದ ಬಗ್ಗೆ ಈವರೆಗೆ ವಿವರಗಳೇ ಲಭ್ಯವಾಗಿಲ್ಲ, ಶಕ್ತಿ ಯೋಜನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ ಈಗಾಗಲೇ ನಷ್ಟದ ಹಾದಿ ಹಿಡಿದಿದೆ, ಹೆಚ್ಚುವರಿ ದರ ಏರಿಕೆ ಪರೋಕ್ಷವಾಗಿ ಪ್ರಯಾಣಿಕರ ಮೇಲೆ ಹೇರಲಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆಗೆ ಸರ್ಕಾರ ಎಸ್ಕಾಂ ಗಳಿಗೆ ಹಣ ಪಾವತಿಸದ ಪರಿಣಾಮ ಯೋಜನೆ ಫಲಾನುಭವಿಗಳಿಂದಲೇ ವಸೂಲಿ ಮಾಡುವುದಕ್ಕಾಗಿ ಅಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಆ ಮೂಲಕ ಗೃಹ ಜ್ಯೋತಿಗೆ ಇತಿಶ್ರೀ ಆಡುವ ಮುನ್ಸೂಚನೆ ನೀಡಿದ್ದಾರೆ” ಎಂದು ವಾಗ್ದಾಳಿ ಮಾಡಿದರು.

“ಪಂಚ ಭಾಗ್ಯಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ಒಂದೂವರೆ ವರ್ಷದಲ್ಲೇ ಯೋಜನೆಗಳನ್ನು ಕಾರ್ಯಗತ ಮಾಡುವಲ್ಲಿ ಸಂಪೂರ್ಣ ಎಡವಿದೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದ್ದು, ಕೃಷಿ ಸೇರಿದಂತೆ ಯಾವುದೇ ಕ್ಷೇತ್ರಗಳ ಅಭಿವೃದ್ಧಿಗೂ ಬಿಡಿಗಾಸು ಇಲ್ಲದೆ ಬರಿಗೈಯಲ್ಲಿ ಕೈ ಚಾಚಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ” ಎಂದರು.

“ಕಾAಗ್ರೆಸ್ಸಿಗರಿಗೆ ಅಧಿಕಾರ ಅನುಭವಿಸಲು ಜನ ಆಯ್ಕೆ ಮಾಡಿಲ್ಲ, ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿ ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿ ಚುನಾಯಿಸಿದ್ದಾರೆ, ಆದರೆ ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲವೂ ಮಣ್ಣು ಪಾಲಾಗುತ್ತಿವೆ. ಸ್ವಪ್ರತಿಷ್ಠೆ, ಸ್ವಾರ್ಥ, ಭ್ರಷ್ಟಾಚಾರದಲ್ಲಿ ಮುಳುಗೇಳುವ ಗುರಿಯನ್ನು ಮಾತ್ರ ಈ ಕಾಂಗ್ರೆಸ್ ಸರ್ಕಾರ ಇಟ್ಟುಕೊಂಡAತೆ ಕಾಣುತ್ತಿದೆ. 2025 ಜನತೆ ಹಾಗೂ ರಾಜ್ಯದ ಪಾಲಿಗೆ ಕರಾಳ ವರ್ಷವಾಗುವ ಸೂಚನೆ ಕಾಣುತ್ತಿದೆ, ಜನಾಕ್ರೋಶ ಭುಗಿಲೇಳುವ ಮುನ್ನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಕೊಟ್ಟು ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಲಿ” ಎಂದು ಹೇಳಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";