ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

Kannada Nadu
ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.

ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";