ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಗೊಂಡ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆ ಜರುಗಿತು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಈಶ್ವರ ಖಂಡ್ರೆ, ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ: ರಾಕೇಶ್ ಕುಮಾರ್ . ಕೆ., ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಗೊಂಡ, ಕುರುಬ ಸಮಾಜದ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Email
Print
Telegram