ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

Kannada Nadu
ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ
New Delhi, Apr 02 (ANI): Opposition MPs protest in the Lok Sabha against the Waqf (Amendment) Bill during the Budget Session of Parliament, in New Delhi on Wednesday. (ANI Photo/SansadTV)

ನವದೆಹಲಿ: ಲೋಕಸಭೆಯಲ್ಲಿ ಸತತ 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆಯಿತು. ಲೋಕಸಭೆಯಲ್ಲಿ ಬುಧವಾರ ಮಧ್ಯಾಹ್ನವೇ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದರೂ, ಇದರ ಮೇಲೆ ಸತತ 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ ದೊರೆತಿದೆ. ಗುರುವಾರ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಲಿದ್ದೂ ಅಲ್ಲೂ ಕೂಡ ಗದ್ದಲವೇಳಬಹುದೇ ಎಂದು ಕಾದು ನೋಡಬೇಕಿದೆ.

ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಸದನವು ವಿರೋಧ ಪಕ್ಷದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತದ ಮೂಲಕ ತಿರಸ್ಕರಿಸಿತು. ವಿರೋಧ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರ ತಿದ್ದುಪಡಿ ಪ್ರಸ್ತಾವನೆಯ ಮೇಲೆ ಬೆಳಗಿನ ಜಾವ 1.15 ಕ್ಕೆ ಮತದಾನ ನಡೆಯಿತು.

ಇದನ್ನು 231 ವಿರುದ್ಧ 288 ಮತಗಳಿಂದ ತಿರಸ್ಕರಿಸಲಾಯಿತು. ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರು ಇರಬಾರದು ಎಂಬ ಪ್ರಸ್ತಾವನೆ ಇತ್ತು. ಲೋಕಸಭೆಯಲ್ಲಿ ಈ ಮಸೂದೆಯ ಬಗ್ಗೆ 12 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಯಿತು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";