ಆಪರೇಷನ್ ಸಿಂಧೂರ್: ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತದ ಪ್ರತೀಕಾರದ ದಾಳಿ

Kannada Nadu
ಆಪರೇಷನ್ ಸಿಂಧೂರ್: ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತದ ಪ್ರತೀಕಾರದ ದಾಳಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.

ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ಭಾರತೀಯ ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.
ಭಾರತದ ಆಪರೇಷನ್ ಸಿಂಧೂರ್‌ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸುತ್ತಿರುವ ಸರ್ಜಿಕಲ್ ಸ್ಟ್ರೈಕ್ ಆಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ೯ ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ ಎನ್ನಲಾಗಿದೆ.

Operation Sindoor: हॅमर, स्कॅल्प मिसाईल आणि राफेल...; भारताच्या हवाई हद्दीत राहून हल्ला, जगानं ताकद पाहिली - Marathi News | Operation Sindoor Hammer Scalp Missile and Rafale Attack ...

ಒಟ್ಟು ಒಂಬತ್ತು ತಾಣಗಳ ಮೇಲೆ ದಾಳಿ ಮಾಡಲಾಗಿದೆ”.ಈ “ನಿಖರ ದಾಳಿ”ಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾತ್ರಿಯಿಡೀ ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಸೇನೆ ಮೂಲಗಳಿಂದ ತಿಳಿದುಬಂದಿದೆ.

ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ –ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‌ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟ್ಲಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯದ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ದಾಳಿ ನಡೆಸಿದೆ.

ಲಷ್ಕರ್–ಎ–ತಯಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅಹ್ಲೆ ಹದಿತ್ ಮತ್ತು ಮುಜಫರಾಬಾದ್‌ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.
ಮಧ್ಯರಾತ್ರಿ ೧.೪೪ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕ್ರಮಗಳು ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಬದಲಾಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ದಾಳಿಗೆ ಆಯ್ದುಕೊಂಡ ೯ ಸ್ಥಳಗಳಲ್ಲಿ ೪ ಪಾಕಿಸ್ತಾನದಲ್ಲಿದ್ದರೆ ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";