ಸುಗ್ರೀವಾಜ್ಞೆ ಮೂಲಕ ಮಿಳುನಾಡಿಗೆ ನೀರು ಹರಿಸುವುದನ್ನ ತಕ್ಷಣ ನಿಲ್ಲಿಸಿ

- ಇಲ್ಲದಿದ್ದಲ್ಲಿ ಜನಪ್ರತಿನಿಧಿಗಳ ಮನೆ ಮತ್ತು ಕಚೇರಿಗಳ ಮುಂದೆ ಧರಣಿ: ಜಯಕರ್ನಾಟಕ ಸಂಘಟನೆ ಎಚ್ಚರಿಕೆ

- ರಸ್ತೆಯುದ್ದಕ್ಕೂ ಉರುಳ ಸೇವೆ ಮಾಡಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ - ವಿಧಾನಸೌಧ ಮುತ್ತಿಗೆಗೆ ಪ್ರಯತ್ನ

- ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ - ಪ್ರತಿಭಟನಾಕಾರರ ಬಂಧನ

ಬೆಂಗಳೂರು : ಕರುನಾಡು ಬರದ ಸಂಕಷ್ಟದಲ್ಲಿರುವ ಸಂಧರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬೇಡಿ ಎನ್ನುವ ಸಾರ್ವಜನಿಕರ ಮನವಿಯನ್ನು ಧಿಕ್ಕರಿಸಿ ನೀರನ್ನ ಸರಾಗವಾಗಿ ಹರಿಸುತ್ತಿರುವುದನ್ನ ಖಂಡಿಸಿ ಜಯಕರ್ನಾಟಕ ರಾಜ್ಯಾಧ್ಯಕ್ಷರಾದ ಬಿ.ಎನ್‌ ಜಗದೀಶ್‌ ನೇತೃತ್ವದಲ್ಲಿ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಉರುಳು ಸೇವೆ ಮಾಡಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದರು. 

ರಾಜ್ಯ ಸಂಕಷ್ಟದಲ್ಲಿ ಇದ್ದಾಗ ನೀರು ಬೀಡಬೇಡಿ, ಯಾವುದೇ ಸಮಸ್ಯೆಗೂ ನಿಮ್ಮ ಜೊತೆಗೆ ಇದ್ದೇವೆ ಎಂದರೂ ರಾಜಕಾರಣಿಗೂ ತಮ್ಮ ಬೇಳೆ ಕಾಳನ್ನು ಬೇಯಿಸಿಕೊಳ್ಳುವ ಉದ್ದೇಶದಿಂದ ನೀರನ್ನ ಹರಿಸುತ್ತಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ರೈತರನ್ನ, ಕನ್ನಡಪರ ಸಂಘಟನೆಗಳನ್ನು ಹೊರಗಿಟ್ಟು ತೀರ್ಮಾನಿಸಿದ್ದಾರೆ. ಯಾವುದೇ ಪಕ್ಷವೂ ಅಧಿಕಾರದಲ್ಲಿದ್ದಾಗ ರಾಜ್ಯದ ಪರ ನಿರ್ಧಾರ ಕೈಗೊಂಡಿಲ್ಲ. ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸುವುದನ್ನ ಬಿಟ್ಟು ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. 

25 ಬಿಜೆಪಿ ಸಂಸದರು ಸ್ವಾಭಿಮಾನ ತೋರಿಸಬೇಕು. ಸರಿಯಾದ ದಾಖಲೆಗಳನ್ನು ಕೋರ್ಟ್‌ಗೆ ನೀಡದೇ ಇದ್ದಂತಹ ಅಧಿಕಾರಿಗಳು ಮತ್ತು ಕಾನೂನು ತಂಡದ ಮೇಲೆ ಕ್ರಮಕೈಗೊಳ್ಳಬೇಕು. ಕಾಂಗ್ರೆಸ್‌ ಪಕ್ಷ ತಮಿಳುನಾಡಿನ ತಮ್ಮ ಮಿತ್ರ ಪಕ್ಷವನ್ನು ಮನವೊಲಿಸಬಹುದಿತ್ತು. ಇವರೆಲ್ಲರೂ ಸೇರಿಕೊಂಡು ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. 

ಕನ್ನಡಪರ ಹಾಗೂ ರೈತ ಸಂಘಟನೆಗಳು ಸ್ವಾರ್ಥದಿಂದಲ್ಲ, ಅಭಿಮಾನದಿಂದ ಹೋರಾಟ ಮಾಡುತ್ತಿದ್ದೇವೆ. ಸುಗ್ರೀವಾಜ್ಞೆ ಮೂಲಕ ರಾಜ್ಯ ಸರಕಾರ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಈ ಕೂಡಲೇ ನೀರನ್ನ ನಿಲ್ಲಿಸುವ ನಿರ್ಧಾರ ಕೈಗೊಳ್ಳಬೇಕು. ಇಲ್ಲದೇ ಇದ್ದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಗಮನ ಸೇಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಜನಪ್ರತಿನಿಧಿಗಳ ಮನೆ ಮತ್ತು ಕಚೇರಿಗಳ ಮುಂದೆ ನಿರಂತರ ಧರಣಿ ಮಾಡಲಿದ್ದೇವೆ ಎಂದು ಜಯಕರ್ನಾಟಕ ರಾಜ್ಯಾಧ್ಯಕ್ಷರಾದ ಬಿ.ಎನ್‌ ಜಗದೀಶ್‌ ಎಚ್ಚರಿಕೆ ನೀಡಿದರು

Facebook
Twitter
LinkedIn
Email
WhatsApp
Telegram
Tumblr

Leave a Comment

Your email address will not be published. Required fields are marked *

Translate »
Scroll to Top