ಬಳ್ಳಾರಿ: ಆಗಸ್ಟ್ ತಿಂಗಳ ವೇತನ ಬಿಡುಗಡೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಅವೈಜ್ಞಾನಿಕ ಹೇಳಿಕೆ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ಒಂದು ದಿನದ ಸಾಂಕೇಂತಿಕ ಧರಣಿ ನಡೆಸಲಾಯಿತು
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಾಂಕೇತಿಕ ಧರಣಿ ಹಮ್ಮಿಕೊಂಡ ಅತಿಥಿ ಉಪನ್ಯಾಸಕರು ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಟಿ.ದುರುಗಪ್ಪ ಮಾತನಾಡಿ, ಸೇವಾ ಖಾಯಾಮಾತಿ ಮತ್ತು ಆಗಸ್ಟ್ ತಿಂಗಳ ವೇತನ ಬಿಡುಗಡೆ ಮಾಡಬೇಕು. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಅವೈಜ್ಞಾನಿಕ ಹೇಳಿಕೆಯನ್ನು ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು. ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡ ತಿಂಗಳಿಂದ 12 ತಿಂಗಳು ವೇತನವನ್ನು ಆಯಾ ತಿಂಗಳ ಐದನೇ ತಾರೀಖಿನ ಒಳಗಾಗಿ ಬಟವಾಡೆ ನೀಡಿ. ಯುಜಿಸಿ ನಿಯಾಮಾಳಿಯಂತೆ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ.ಹನುಮೇಶ್ ಮಾತನಾಡಿ, ಸರ್ಕಾರದ ವಿರೋಧಿ ಧೋರಣೆಗಳ ಬಗ್ಗೆ ವಿವರವಾಗಿ ತಿಳಿಸಿದರು.
ಈ ಸಂದರ್ಭಲ್ಲಿ ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.