ಕೊಡಗು: ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಕ್ಷಣವನ್ನು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಕಣ್ತುಂಬಿಕೊಂಡರು. ಮಡಿಕೇರಿ ಶಾಸಕರಾದ ಮಂಥರ್ ಗೌಡ, ವಿರಾಜಪೇಟೆ ಶಾಸಕರಾದ ಎ ಎಸ್ ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ ಅವರ ಜೊತೆಯಲ್ಲಿ ತೀರ್ಥ ಕುಂಡಿಕೆಯ ಬಳಿ ನಿಂತು ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಸಚಿವ ಎನ್ ಎಸ್ ಬೋಸರಾಜ್ ಅವರು, ಕಾವೇರಿ ಮಾತೆ ಕೊಡಗು ಕರ್ನಾಟಕಕ್ಕೆ ಅಷ್ಟೇ ಅಲ್ಲ. ತಮಿಳುನಾಡಿಗೂ ಅನ್ನ ನೀರು ಒದಗಿಸುತ್ತಿದ್ದಾಳೆ. ಈ ಬಾರಿ ರಾಜ್ಯಕ್ಕೆ ಸಮೃದ್ಧಿ ನೀಡಲೆಂದು ಪ್ರಾರ್ಥಿಸಲಾಗಿದೆ ಎಂದು ಹೇಳಿದರು.
Facebook
Twitter
LinkedIn
Telegram
WhatsApp
Print
Email