ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಆಚರಣೆ
ದೇವನಹಳ್ಳಿ, : ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಏಐಸಿಸಿ ಸದಸ್ಯ ಎಂ.ಎಸ್. ರಕ್ಷಾ ರಾಮಯ್ಯ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಇಂದು ಹಲವಾರು ಸಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ದೇವನಹಳ್ಳಿಯ ಎಂ.ಎಸ್. ರಾಮಯ್ಯ ಯೂಥ್ ಫೌಂಡೇಷನ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್, ಗೋವಿಂದರಾಜನಗರದ ಶಾಸಕರಾದ ಪ್ರಿಯಾ ಕೃಷ್ಣ ಅವರು ಆಗಮಿಸಿ ರಕ್ಷಾ ರಾಮಯ್ಯ ಅವರಿಗೆ ಶುಭ ಕೋರಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ರಕ್ಷಾ ರಾಮಯ್ಯ ಅವರಿಗೆ ಶುಭಾಶಯಗಳನ್ನು ಹೇಳಿದರು.
ಚಿಕ್ಕಬಳ್ಳಾಪುರ ಜೈನ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಉಚಿತ ಡಯಾಲಿಸಿಸ್ ಗೆ ವ್ಯವಸ್ಥೆ ಮಾಡಲಾಗಿತ್ತು. ರೋಗಿಗಳಿಗೆ ಇದೇ ಸಂದರ್ಭದಲ್ಲಿ ಹಣ್ಣು, ಹಂಪಲು ವಿತರಿಸಲಾಯಿತು. ವಿವಿಧ ದೇವಸ್ಥಾಗಳಲ್ಲಿ ರಕ್ಷಾ ರಾಮಯ್ಯ ಅವರ ಹೆಸರಿನಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.