ಪ್ರಧಾನಮಂತ್ರಿ ನರೇಂದ್ರ ಮೋದಿಗೆ ರಾಮ ಜನ್ಮಭೂಮಿ ಟ್ರಸ್ಟ್ ನಿಂದ ಆಹ್ವಾನ
ನವದೆಹಲಿ: ಜನವರಿ 22, 2024 ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧಿಕೃತವಾಗಿ ಆಹ್ವಾನ ನೀಡಿದೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಜನವರಿ 22, 2024 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸುವ ದಿನಾಂಕವನ್ನು ದೃಢಪಡಿಸಿದರು.
ಇಂದು ನನಗೆ ಅತ್ಯಂತ ಭಾವನಾತ್ಮಕ ದಿನವಾಗಿದೆ. ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರದ ಅಧಿಕಾರಿಗಳು ನನ್ನ ನಿವಾಸಕ್ಕೆ ನನ್ನನ್ನು ಭೇಟಿಯಾಗಲು ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಆಹ್ವಾನಿಸಿದರು .ನಾನು ತುಂಬಾ ಧನ್ಯನಾಗಿದ್ದೇನೆ. ಇಂತಹ ಐತಿಹಾಸಿಕ ಸಂದರ್ಭದಲ್ಲಿ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ,ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.