ಓರ್ವ ಮಗು, ಮೂವರು ಮಹಿಳೆ ಸೇರಿ 13 ಮಂದಿ ಮೃತಿ
ಚಿಕ್ಕಬಳ್ಳಾಪುರ: ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಚಿತ್ರಾವಳಿ ಬಳಿ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ
ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಮಗು, ಮೂವರು ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಒಬ್ಬೊಬ್ಬರು ಒಂದೊಂದು ಊರಿನವರು ಎಂಬ ಮಾಹಿತಿ ಸಿಕ್ಕಿದೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
— CM of Karnataka (@CMofKarnataka) October 26, 2023
ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
- ಮುಖ್ಯಮಂತ್ರಿ @siddaramaiah #Chikballapura #Accident pic.twitter.com/GLLPlUAQiu
2 ಲಕ್ಷ ಪರಿಹಾರ ಘೋಷಿಸಿದ ಸಿಎಂ : ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಮುಖ್ಯಮಂತ್ರಿಗಳು ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ